ಗೋವಾದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕಾಂಗ್ರೆಸ್ ಒತ್ತಾಯ

ಗೋವಾ ಮುಖ್ಯಮಂತ್ರಿ ಚಿಕಿತ್ಸೆ ಪಡೆಯುವುದಕ್ಕಾಗಿ ಅಮೆರಿಕಾಗೆ ತೆರಳಿರುವ ಹಿನ್ನೆಲೆಯಲ್ಲಿ ಗೋವಾದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಗೋವಾದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕಾಂಗ್ರೆಸ್ ಒತ್ತಾಯ
ಗೋವಾದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕಾಂಗ್ರೆಸ್ ಒತ್ತಾಯ
Updated on: 
ಗೋವಾ ಮುಖ್ಯಮಂತ್ರಿ ಚಿಕಿತ್ಸೆ ಪಡೆಯುವುದಕ್ಕಾಗಿ ಅಮೆರಿಕಾಗೆ ತೆರಳಿರುವ ಹಿನ್ನೆಲೆಯಲ್ಲಿ ಗೋವಾದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. 
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಮಾಕಾಂತ್ ಖಲಾಪ್,  ಗೋವಾ ರಾಜ್ಯ ಸಾಂವಿಧಾನಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಭೇಟಿಗೆ ಅನುಮತಿ ಕೋರಲಾಗಿದ್ದು, ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದ್ದಾರೆ. 
ಮುಖ್ಯಮಂತ್ರಿಗಳು ಅನಾರೋಗ್ಯದ ಕಾರಣದಿಂದಾಗಿ ಕಚೇರಿಗೆ ನಿಯಮಿತವಾಗಿ ಬರಲು ಸಾಧ್ಯವಾಗುತ್ತಿಲ್ಲ. ಆದರೆ ಅವರು ತಮ್ಮ ಜವಾಬ್ದಾರಿಯನ್ನು ಯಾರಿಗೂ ವಹಿಸಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸಾಂವಿಧಾನಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಮುಖ್ಯಮಂತ್ರಿಗಳಷ್ಟೇ ಅಲ್ಲದೇ ಗೋವಾದ ಇಂಧನ ಸಚಿವ ಪಾಂಡುರಂಗ್ ಮಡ್ಕೈಕರ್ ಹಾಗೂ ನಗರಾಭಿವೃದ್ಧಿ ಸಚಿವ ಫ್ರಾನ್ಸಿಸ್ ಡಿಸೋಜಾ ಅವರೂ ಅನಾರೋಗ್ಯ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com