ಪೆಟ್ರೋಲ್, ಡಿಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರೂಪಾಯಿ ಮೌಲ್ಯ ಐತಿಹಾಸಿಕವಾಗಿ ಕುಸಿದಿದೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಈಗ ಏನು ಮಾಡಬೇಕೆಂದು ಗೊತ್ತಾಗುತ್ತಿಲ್ಲ. ಅಥವಾ ಇದರಿಂದ ಜನಸಾಮಾನ್ಯರ ಮೇಲೆ ಉಂಟಾಗುತ್ತಿರುವ ಸಂಕಷ್ಟಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ದೇಶದ ಆರ್ಥಿಕತೆ ಹಿಂದೆಂದೂ ಇಷ್ಟು ಹದಗೆಟ್ಟಿರಲಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.