2019 ಲೋಕಸಭಾ ಚುನಾವಣೆ: ಬಿಜೆಪಿ ವಿರುದ್ಧ ಒಗ್ಗೂಡಿದ ವಿಪಕ್ಷಗಳ ಯುವ ಸಂಘಟನೆ

ತೀವ್ರ ಕುತೂಹಲ ಕೆರಳಿಸಿರುವ 2019 ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಯುವ ಸಂಘಟನೆ ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದಾಗಿವೆ ಎಂದು ಮಂಗಳವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ 2019 ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಯುವ ಸಂಘಟನೆ ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ. 
ಈ ಕುರಿತಂತೆ ಮಾತನಾಡಿರುವ ಭಾರತೀಯ ಯುವ ಕಾಂಗ್ರೆಸ್ ನಾಯಕ ಅಮ್ರಿಶ್ ರಂಜನ್ ಪಾಂಡೆಯವರು, ಭಾರತದ ಭವಿಷ್ಯಕ್ಕಾಗಿ ವಿರೋಧ ಪಕ್ಷಗಳ ಸಾಕಷ್ಟು ಯುವ ಸಂಘಟನೆಗಳು ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದಾಗುತ್ತಿವೆ. ಇದು ಚುನಾವಣೆ ವರ್ಷವಾಗಿದ್ದು, ಮತದಾನದಲ್ಲಿ ಯುವ ಭಾರತ ಪ್ರಮುಖ ಪಾತ್ರವನ್ನು ವಹಿಸಿದೆ. ಕೇಂದ್ರ ಸರ್ಕಾರ ವೈಫಲ್ಯಗಳನ್ನು ನಾವು ಬಹಿರಂಗಪಡಿಸುತ್ತೇವೆಂದು ಹೇಳಿದ್ದಾರೆ. 
ಯುವಕರನ್ನು ತಲುಪುವ ಸಲುವಾಗಿ ಸಮಾಜವಾದಿ ಪಕ್ಷ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಜನತಾ ದಳ, ರಾಷ್ಟ್ರೀಯ ಲೋಕದಳ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಡಿಎಂಕೆ ಪಕ್ಷಗಳ ಯುವಕ ಸಂಘಟನೆಗಳು ಶೀಘ್ರದಲ್ಲಿಯೇ ರಾಜಧಾನಿ ದೆಹಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಲಿವೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com