ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಜನರು ಬಿಜೆಪಿಗೆ ಬೆಂಬಲ ಮುಂದುವರಿಸಿದ್ದಾರೆ- ಅಮಿತ್ ಶಾ

ಕರ್ನಾಟಕ ಜನ ಬಿಜೆಪಿಗೆ ತಮ್ಮ ಬೆಂಬಲ ಮುಂದುವರಿಸುತ್ತಿದ್ದಾರೆ ಎಂಬುದು ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಿಂದ ಸಾಬೀತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ...
ಅಮಿತ್ ಶಾ
ಅಮಿತ್ ಶಾ
ನವದೆಹಲಿ:  ಕರ್ನಾಟಕ ಜನ ಬಿಜೆಪಿಗೆ ತಮ್ಮ ಬೆಂಬಲ ಮುಂದುವರಿಸುತ್ತಿದ್ದಾರೆ ಎಂಬುದು ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಿಂದ ಸಾಬೀತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
 ತಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ, ಜೊತೆಗೆ ಜೆಡಿಎಸ್ ಕಾಂಗ್ರೆಸ್ ಅಪವಿತ್ರ ಮೈತ್ರಿಯಿಂದಾಗಿ ಜನ ಅಸಮಾಧಾನ ಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ನರೇಂದ್ರ ಮೋದಿ ಮತ್ತು ಬಿಜೆಪಿ  ರಾಜ್ಯದ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ, ಆದರೆ ದೋಸ್ತಿ ಪಕ್ಷಗಳು ಅವಕಾಶವಾದಿ ರಾಜಕಾರಣ ಮಾಡುತ್ತಿವೆ ಎಂದು ದೂರಿದ್ದಾರೆ. ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಕರ್ನಾಟಕದ ಜನತೆ ಹೃದಯಪೂರ್ವಕ ಧನ್.ವಾದ ಎಂದು  ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com