ಸಾಮಾಜಿಕ ಕಾರ್ಯಕರ್ತ ಸಂಜಯ್ ಭಲೆರೋ ಎಂಬುವವರು ಈ ಬಗ್ಗೆ ಬಾಂಬೇ ಹೈಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಿದ್ದು, ಈ ಬಗ್ಗೆ ಮಾತನಾಡಿರುವ ಅವರು, ನಾನು ಪೊಲೀಸ್ ವರಿಷ್ಠಾಧಿಕಾರಿಗಳು ಮಾಧ್ಯಮಗಳಿಗೆ ಬಹಿರಂಗ ಪಡಿಸಿದ ಸಾಕ್ಷ್ಯಾಧಾರದ ಪತ್ರವನ್ನು ಓದಿದ್ದೇನೆ. ಅದು ನಿಜಕ್ಕೂ ಪ್ರಮುಖ ಸಾಕ್ಷ್ಯವಾಗಿತ್ತು. ಈ ಹಿಂದೆ ಕೋರ್ಟ್ ಕೂಡ ಪ್ರಕರಣ ಸಂಬಂಧ ಯಾವುದೇ ರೀತಿಯ ಸಾಕ್ಷ್ಯಾಧಾರಗಳನ್ನು ಬಹಿರಂಗ ಮಾಡಬಾರದು ಎಂದು ಆದೇಶಿಸಿತ್ತು. ಹೀಗಿದ್ದೂ ಪರಮ್ ಬೀರ್ ಸಿಂಗ್ ಅವರು ಸಾಕ್ಷ್ಯವನ್ನು ಬಿಡುಗಡೆ ಮಾಡುವ ಮೂಲಕ ನ್ಯಾಯಾಂಗ ನಿಂದನೆ ಎಸಗಿದ್ದಾರೆ ಎಂದು ಹೇಳಿದ್ದಾರೆ.