ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಜ್ಯದ 4 ಶಿಕ್ಷಕರು: ಕನ್ನಡ ಶಿಕ್ಷಕರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಜ್ಯದ 4 ಶಿಕ್ಷಕರು: ಕನ್ನಡ ಶಿಕ್ಷಕರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಜ್ಯದ 4 ಶಿಕ್ಷಕರು: ಕನ್ನಡ ಶಿಕ್ಷಕರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಅತ್ಯುತ್ತಮ ಶಿಕ್ಷಕ ಹೆಸರಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದು, ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದ ಕನ್ನಡ ಶಿಕ್ಷಕರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕೊಂಡಾಡಿದ್ದಾರೆ...
Published on
ನವದೆಹಲಿ: ಅತ್ಯುತ್ತಮ ಶಿಕ್ಷಕ ಹೆಸರಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದು, ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದ ಕನ್ನಡ ಶಿಕ್ಷಕರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕೊಂಡಾಡಿದ್ದಾರೆ. 
ಬೆಂಗಳೂರು ಉತ್ತರ ವಿಭಾಗದ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಇತ್ತೀಚೆಗೆ ವರ್ಗಾವಣೆಗೊಂಡಿರುವ ಶಿಕ್ಷಕಿ ಶೈಲಾ, ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಡಾ.ಎಂ.ಶಿವಕುಮಾರ್ ಮತ್ತು ದೇವನಹಳ್ಳಿ ತಾಲೂಕಿನ ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕ ಡಾ.ಜಿ.ರಮೇಶಪ್ಪ, ಬೆಂಗಳೂರಿನ ದೆಹಲಿ ಪಬ್ಲಿಕ್ ಶಾಲೆಯ ಮಂಜು ಬಾಲಸುಬ್ರಹ್ಮಣ್ಯಂ ಅವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. 
ಈ ನಾಲ್ವರೂ ಶಿಕ್ಷಕರಿಗೂ ಶುಭಾಶಯಗಳನ್ನು ಕೋರಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿಯವರು ಶಿಕ್ಷಕರನ್ನು ಹೊಗಳಿದ್ದಾರೆ. 
ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಗಣಿತದ ಕ್ಲಿಷ್ಟ ಸಮಸ್ಯೆಯನ್ನೂ ಸುಲಭವಾಗಿ ಕಲಿಸುತ್ತಿರವ ಶಿವಕುಮಾರ್ ಅವರಿಗೆ ನನ್ನ ನಮನಗಳು. ಅವರು ತರಗತಿಯಲ್ಲಿ ಪಾಠ ಮಾಡುತ್ತಿರುವ ಸಾಕಷ್ಟು ವಿಡಿಯೋಗಳು ಇಂಟರ್ನೆಟ್'ನಲ್ಲೂ ಲಭ್ಯವಿದೆ. ಕರ್ನಾಟಕದ ಚಿಕ್ಕಬಳ್ಳಾಪುರದ ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಬೆಂಗಳೂರಿನ ದೆಹಲಿ ಪಬ್ಲಿಕ್ ಶಾಲೆಯ ಮಂಜು ಬಾಲಸುಬ್ರಹ್ಮಣ್ಯಂ ಅವರು ಶಾಲೆಯಲ್ಲಿ ವಿವಿಧತೆಯನ್ನು ಮೂಡಿಸಲು ಶ್ರಮಿಸಿದವರು. ಅಂತೆಯೇ ದಿವ್ಯಾಂಗ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವಲ್ಲಿಯೂ ಶ್ರಮಿಸುತ್ತಿದ್ದಾರೆ. ಇಂದು ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆಯುತ್ತಿರುವ ಅವರಿಗೆ ಅಭಿನಂದನೆಗಳು ಎಂದು ಶ್ಲಾಂಘಿಸಿದ್ದಾರೆ.
ಬೆಂಗಳೂರು ಉತ್ತರದಲ್ಲಿ ನಾವು ಕೆಲಸ ಮಾಡುತ್ತಿದ್ದ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದವರು ಶೈಲಾ. ಆರ್.ಎನ್. ಅವರ ನಿಸ್ವಾರ್ಥ ಸೇವೆಯಿಂದಾಗಿ ಸಾಕಷ್ಟು ಬಡ ಮಕ್ಕಳ ಬದುಕು ಧನಾತ್ಮಕವಾಗಿ ಬದಲಾಗಿದೆ. ಇಂತಹ ಶಿಕ್ಷಕರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಕೊಂಡಾಡಿದ್ದಾರೆ.
ವಿದ್ಯಾರ್ಥಿಗಳು ಆರೋಗ್ಯವಂತರಾಗಿದ್ದರೆ, ದೃಢ ಆರೋಗ್ಯ ಪಡೆದರೆ ದೇಶವೂ ಸದೃಢವಾಗಿರುತ್ತದೆ. ಬೆಂಗಳೂರು ಗ್ರಾಮಾಂತರ ಶಾಲೆಯೊಂದರ ದೈಹಿಕ ಶಿಕ್ಷಕ ಡಾ.ರಮೇಶಪ್ಪ ಅವರು ಶಾಲೆಯಲ್ಲಿ ಯೋಗ ಮತ್ತು ಕ್ರೀಡೆಯನ್ನು ಮಕ್ಕಳಿಗೆ ಸಮರ್ಥವಾಗಿ ಕಲಿಸುತ್ತಿದ್ದಾರೆ. ದಿವ್ಯಾಂಗ ಮಕ್ಕಳ ಕಲ್ಯಾಣಕ್ಕೆ ಅವರ ಕೊಡುಗೆ ಅನನ್ಯ. ಅವರಿಗೆ ಅಭಿನಂದನೆ ಹಾಗೂ ಶುಭ ಹಾರೈಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com