ಕೋಲ್ಕತಾ ಮೇಲ್ಸೇತುವೆ ಕುಸಿತ: ಸಾವಿನ ಸಂಖ್ಯೆ 3 ಕ್ಕೆ ಏರಿಕೆ, ಎನ್ ಡಿಆರ್ ಎಫ್ ಕಾರ್ಯಾಚರಣೆ ಸ್ಥಗಿತ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಮಜ್ಹೆರ್ಹಾತ್ ಮೇಲ್ಸೇತುವೆ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೋಲ್ಕತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಮಜ್ಹೆರ್ಹಾತ್ ಮೇಲ್ಸೇತುವೆ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. 
ಮಂಗಳವಾರ ಕುಸಿದಿದ್ದ ಮೇಲ್ಸೇತುವೆಯಲ್ಲಿ ಈ ವರೆಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ. ಏತನ್ಮಧ್ಯೆ ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿದ್ದ ಎನ್ ಡಿಆರ್ ಎಫ್ ತಂಡ ತನ್ನ ಕಾರ್ಯಾಚರಣೆ ಪೂರ್ಣಗೊಳಿಸಿ ತೆರವು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಆದರೆ ಆಗ್ನಿಶಾಮಕ ದಳ ಮತ್ತು ಕೋಲ್ಕತಾ ಮಹಾನಗರ ಪಾಲಿಕೆ ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರೆಸಿದೆ. 
ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ ಮೇರೆಗೆ ನಿನ್ನೆ ರಾತ್ರಿಯಿಡೀ ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರೆದಿತ್ತು. ಇಂದು ಬೆಳಗ್ಗೆ 6.35ರ ವೇಳೆಯಲ್ಲಿ ಎನ್ ಡಿಆರ್ ಎಫ್ ತಂಡ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ರಾತ್ರಿ ಗೌತಮ್ ಮಂಡಲ್ ಎಂಬ ವ್ಯಕ್ತಿಯ ಶವವನ್ನು ಹೊರತೆಗೆಯಲಾಗಿದ್ದು, ಆ ಮೂಲಕ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿದ್ದ ಇಬ್ಬರು ಕಾರ್ಮಿಕರ ಪೈಕಿ ಈತ ಕೂಡ ಒಬ್ಬನಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಈ ವರೆಗೂ 19 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಸಣ್ಣ ಪುಟ್ಟ ಗಾಯಗಳಾಗಿದ್ದ ಕಾರ್ಮಿಕರು ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಅಂತೆಯೇ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇತ್ತ ಪಶ್ಚಿಮ ಬಂಗಾಳ ಸರ್ಕಾರ ಕೂಡ ದುರಂತದಲ್ಲಿ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಗಾಯಾಳುಗಳ ಕುಟುಂಬಕ್ಕೆ 1 ಲಕ್ಷ ಪರಿಹಾರ ಧನ ನೀಡುವುದಾಗಿ ಹೇಳಿದೆ.
ಅಂತೆಯೇ ಸಿಎಂ ಮಮತಾ ಬ್ಯಾನರ್ಜಿ ಅವರು ಮೇಲ್ಸೇತುವೆ ಕುಸಿತ ಪ್ರಕರಣ ಸಂಬಂಧ ತನಿಖೆಗೆ ಆದೇಶಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com