ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವುದಕ್ಕಾಗಿ ಇಂಟರ್ನ್ಶಿಪ್ ಪ್ರೋಗ್ರಾಂ, ಕೌಶಲ್ಯ ಪ್ರೋಗ್ರಾಂಗಳನ್ನು ಹೆಚ್ಚಿಸುವ ಅವಶ್ಯಕತೆ ಇದ್ದು ವಿದ್ಯಾರ್ಥಿಗಳಿಗೆ ಸಪೋರ್ಟ್ ಸಿಸ್ಟಮ್ ವಾತಾವರಣ ನಿರ್ಮಾಣ ಮಾಡುವ ಅಗತ್ಯವಿದೆ. ಸ್ಟಾರ್ಟ್-ಅಪ್ ಸಂಸ್ಕೃತಿಗೆ ವಿದ್ಯಾರ್ಥಿಗಳು ತೆರೆದುಕೊಳ್ಳುವಂತೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಉದ್ಯಮಶೀಲತೆ ಕುರಿತ ಕೋರ್ಸ್ ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಎಐಸಿಟಿಇ ಅಧ್ಯಕ್ಷರೂ ಆಗಿರುವ ಪ್ರೊ.ಸಹಸ್ರಬುಧೆ ಹೇಳಿದ್ದಾರೆ.