ತೆಲಂಗಾಣ ಚುನಾವಣೆ: ಪ್ರಚಾರದ ಅಖಾಡಕ್ಕೆ ಅಮಿತ್ ಶಾ!

ತೆಲಂಗಾಣ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದು, ಇದೇ 13 ರಂದು ಮೆಹಬೂಬ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on: 

ಹೈದ್ರಾಬಾದ್ : ತೆಲಂಗಾಣ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಚಾರದ   ಅಖಾಡಕ್ಕೆ ಧುಮುಕ್ಕಲಿದ್ದು, ಇದೇ 13 ರಂದು ಮೆಹಬೂಬ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.

ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಚಾರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು  ತೆಲಂಗಾಣ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರಾಮಚಂದರ್ ರಾವ್  ಸುದ್ದಿಸಂಸ್ಥೆಯೊಂದಕ್ಕೆ ಇಂದು ತಿಳಿಸಿದ್ದಾರೆ.

ಚುನಾವಣೆ ಮುಗಿಯುವವರೆಗೂ ಆಗ್ಗಿಂದ್ದಾಗೆ ಅಮಿತ್ ಶಾ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ ಎಂದು ನಿರೀಕ್ಷಿಸಿರುವುದಾಗಿ ಅವರು ಹೇಳಿದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು  ರಾಜ್ಯಮಟ್ಟದಲ್ಲಿ ಮಾತ್ರವಲ್ಲಾ, ಸ್ಥಳೀಯ ಮಟ್ಟದಲ್ಲೂ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಲಕ್ಷ್ಮಣ್ ಈಗಾಗಲೇ ಹೇಳಿದ್ದಾರೆ.  ಚುನಾವಣಾ ಸಿದ್ದತೆ ಕುರಿತಂತೆ ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ವರ್ಷದ ಲೋಕಸಭಾ ಚುನಾವಣೆ ವೇಳೆಯಲ್ಲಿಯೇ ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಬೇಕಾಗಿತ್ತು. ಆದರೆ,  ತೆಲಂಗಾಣ ರಾಷ್ಟ್ರ ಸಮಿತಿ ಸರ್ಕಾರದ ಶಿಫಾರಸ್ಸಿನಂತೆ ವಿಧಾನಸಭೆ ವಿಸರ್ಜನೆಯಾಗಿದ್ದು,ಇದೀಗ ಚುನಾವಣೆ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com