ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ

ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ

ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.
ಶ್ರೀನಗರ: ಜಮ್ಮು-ಕಾಶ್ಮೀರದ ಜನತೆಗೆ ವಿಶೇಷ ಸವಲತ್ತುಗಳನ್ನು, ಹಕ್ಕುಗಳನ್ನು ನೀಡುವ ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ. 
ಆರ್ಟಿಕಲ್ 35ಎ ಅಡಿಯಲ್ಲಿ ಜಮ್ಮು-ಕಾಶ್ಮೀರದ ಸ್ಥಳೀಯ ಜನತೆಗೆ ವಿಶೇಷ ಸವಲತ್ತುಗಳನ್ನು ನೀಡಲಾಗಿದ್ದು, ಹೊರ ರಾಜ್ಯಗಳಿಂದ ಯಾರೂ ಸಹ ಜಮ್ಮು-ಕಾಶ್ಮೀರದಲ್ಲಿ ಆಸ್ತಿಗಳನ್ನು ಖರೀದಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ಈ ಆರ್ಟಿಕಲ್ 35 ಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದ್ದು, ಆರ್ಟಿಕಲ್ ನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ. 
ಒಂದು ವೇಳೆ ಕೇಂದ್ರ ಸರ್ಕಾರವೇನಾದರೂ ಆರ್ಟಿಕಲ್ 35ಎನ್ನು ದುರ್ಬಲಗೊಳಿಸುವುದಕ್ಕೆ ಚಿಂತಿಸಿದರೆ ನಾವು ನಮ್ಮ ದಾರಿ ನೋಡಿಕೊಳ್ಳಬೇಕಾಗುತ್ತದೆ. ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ, ಯಾವುದಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಎಚ್ಚರಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com