ತ್ರಿವಳಿ ತಲಾಖ್ ಮಸೂದೆಗೆ ಕಾಂಗ್ರೆಸ್ ಯಾವತ್ತೂ ವಿರೋಧಿಸಿಲ್ಲ: ಆನಂದ್ ಶರ್ಮಾ

ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಿರುವುದಕ್ಕೆ ಕಾಂಗ್ರೆಸ್ ಕಾರಣ...
ಆನಂದ್ ಶರ್ಮಾ
ಆನಂದ್ ಶರ್ಮಾ
ನವದೆಹಲಿ: ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಿರುವುದಕ್ಕೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪವನ್ನು ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಶನಿವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ತ್ರಿವಳಿ ತಲಾಖ್ ಮಸೂದೆಯನ್ನು ಕಾಂಗ್ರೆಸ್ ಯಾವತ್ತೂ ವಿರೋಧಿಸಿಲ್ಲ. ಬಿಜೆಪಿ ಮಿತ್ರಪಕ್ಷಗಳೇ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿವೆ ಎಂದು ಶರ್ಮಾ ಹೇಳಿದ್ದಾರೆ.
ಬಿಜೆಪಿಗೆ ದೇಶದ ಮುಸ್ಲಿಂ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಒಳ್ಳೆಯ ವಿಚಾರ. ಆದರೆ ದೇಶದ ಪ್ರತಿ ಮಹಿಳೆಯ ಬಗ್ಗೆ? ಸ್ಪಷ್ಟ ಬಹುಮತ ಇದ್ದರೂ ಮಹಿಳಾ ಮೀಸಲಾತಿ ಮಸೂದೆಯನ್ನು ಏಕೆ ಮಂಡಿಸುತ್ತಿಲ್ಲ? ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.
ಇದೇ ವೇಳೆ ಜಿಎಸ್ ಟಿ ಮತ್ತು ನೋಟು ಅಮಾನ್ಯೀಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಶರ್ಮಾ, ಮನಮೋಹನ್ ಸಿಂಗ್ ಅವರು ಪ್ರಜಾಪ್ರಭುತ್ವದ ಪ್ರಧಾನಿಯಾಗಿದ್ದರು. ಆದರೆ ಪ್ರಧಾನಿ ಮೋದಿ ಸರ್ವಾಧಿಕಾರಿಯಾಗಿದ್ದು, ನೋಟ್ ನಿಷೇಧದಿಂದಾಗಿ ಕೋಟ್ಯಾಂತರ ಜನ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com