ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ಅವರು ಭೇಟಿ ಮಾಡಿದ್ದು, ಉಭಯ ನಾಯಕರ ಮಾತುಕತೆಯ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ತೈಲ ಬೆಲೆ ಏರಿಕೆಯೇ ಪ್ರತಿಪಕ್ಷಗಳಿಗೆ ಅಸ್ತ್ರವಾಗುವ ಸಾಧ್ಯತೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.