ಭಾರತ್ ಬಂದ್: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಗೆ ತರಲು ಕಾಂಗ್ರೆಸ್ ಆಗ್ರಹ

ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ ಕಾಂಗ್ರೆಸ್,...
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್
ನವದೆಹಲಿ: ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ ಕಾಂಗ್ರೆಸ್, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂದು ಸೋಮವಾರ ಆಗ್ರಹಿಸಿದೆ.
ಭಾರತ್ ಬಂದ್ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು, ಇಂದು ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.
ತೈಲ ಬೆಲೆ ಏರಿಕೆ ಖಂಡಿಸಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ತಾವು ನೀಡಿದ್ದ ಭರವಸೆಯನ್ನು ಈಡೇರಿಸದಿರುವುದರ ವಿರುದ್ಧ ಭಾರತ್ ಬಂದ್ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದಾಗ ವ್ಯಾಟ್ ಕಡಿಮೆ ಮಾಡುವ ಮೂಲಕ ಜನರ ಮೇಲಿನ ಹೊರೆಯನ್ನು ತಗ್ಗಿಸಲಾಗಿತ್ತು ಎಂದು ಗೊಹ್ಲೋಟ್ ತಿಳಿಸಿದ್ದಾರೆ.
ತೈಲ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಪ್ರಶ್ನಿಸಿದ ಕಾಂಗ್ರೆಸ್ ನಾಯಕ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಚರ್ಚಿಸುತ್ತಾರೆ. ಆದರೆ ಜನಸಾಮಾನ್ಯರ ಕಷ್ಟಗಳ ಬಗ್ಗೆ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com