ಭಾರತ್ ಬಂದ್: ಮತ್ತೆ ಪೆಟ್ರೋಲ್-ಡೀಸೆಲ್ ದರದಲ್ಲಿ ದಾಖಲೆ ಏರಿಕೆ

ಹಲವು ದಿನಗಳಿಂದಲೂ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದನ್ನು ಖಂಡಿಸಿ ಭಾರತ್ ಬಂದ್ ಆಚರಿಸುತ್ತಿರುವ ಬೆನ್ನಲ್ಲೇ ಮತ್ತೆ ಸೋಮವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ಹಲವು ದಿನಗಳಿಂದಲೂ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದನ್ನು ಖಂಡಿಸಿ ಭಾರತ್ ಬಂದ್ ಆಚರಿಸುತ್ತಿರುವ ಬೆನ್ನಲ್ಲೇ ಮತ್ತೆ ಸೋಮವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. 
ಪ್ರತೀ ಲೀಟರ್ ಪೆಟ್ರೋಲ್ ಬೆಲೆ 23 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ ಪ್ರತೀ ಲೀಟರ್'ಗೆ 22 ಪೈಸೆ ಏರಿಕೆ ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ. 
ಇದರಂತೆ ಪೆಟ್ರೋಲ್ ಬೆಲೆ ರೂ.80.73 ಹಾಗೂ ಡೀಸೆಲ್ ಬೆಲೆ ರೂ.72.83 ಆಗಿದೆ. ಇನ್ನು ಮುಂಬೈ ನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ದಾಖಲೆಯ ರೂ.88.12 ಆಗಿದೆ. 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡು ಬಂದಿರುವುದು ಇದೇ ಮೊದಲ ಬಾರಿಗೆಯಾಗಿದೆ. ರಾಜಧಾನಿ ದೆಹಗಲಿಯಲ್ಲಿ ಪೆಟ್ರೋಲ್ ಬೆಲೆ ರೂ.80.73 ಹಾಗೂ ಡೀಸೆಲ್ ಬೆಲೆ 72.83 ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ರೂ.83.91 ಇದ್ದರೆ, ಡೀಸೆಲ್ ಬೆಲೆ ರೂ.76.98 ಇದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 83.36 ಇದ್ದರೆ, ಡೀಸೆಲ್ ಬೆಲೆ ರೂ.75.18 ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com