ವೇಗವಾಗಿ ಬರುತ್ತಿದ್ದ ಬಸ್ ವೊಂದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್'ನ ಗಚಿಬೌಲಿಯಲ್ಲಿ ಸೋಮವಾರ ನಡೆದಿದೆ...
ಹೈದರಾಬಾದ್: ವೇಗವಾಗಿ ಬರುತ್ತಿದ್ದ ಬಸ್ ವೊಂದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್'ನ ಗಚಿಬೌಲಿಯಲ್ಲಿ ಸೋಮವಾರ ನಡೆದಿದೆ.
ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಲಿಂಗಮ್ಪಲ್ಲಿ ಯಿಂದ ಕೋಟಿ ಮಾರ್ಗದತ್ತ ಬಸ್ ಚಲಿಸುತ್ತಿತ್ತು. ಬಸ್ ಚಾಲಕ ವೇಗದ ಮಿತಿಗಿಂತಲೂ ಹೆಚ್ಚಾಗಿ ವಾಹನವನ್ನು ಚಲಾಯಿಸುತ್ತಿದ್ದ.
ಈ ವೇಳೆ ಬಸ್ ನಿಲ್ದಾಣದ ಬಳಿ ಪಾದಚಾರಿಗಳು ರಸ್ತೆ ದಾಟಲು ನಿಂತಿದ್ದರು. ಇದನ್ನು ಗಮನಿಸದ ಚಾಲಕ ವೇಗವಾಗಿ ಬಸ್ ಚಲಾಯಿಸಿದ್ದಾನೆ. ಪರಿಣಾಮ ಮೂವರು ಪಾದಚಾರಿಗಳ ಮೇಲೆ ಬಸ್ ಹರಿದಿದೆ ಎಂದು ತಿಳಿದುಬಂದಿದೆ.
ಪಾದಚಾರಿಗಳು ರಸ್ತೆ ದಾಟಲು ನಿಂತಿದ್ದರು. ಈ ವೇಳೆ ಬಸ್ ಅತೀ ವೇಗವಾಗಿ ಬಂದಿದೆ ಎಂದುಪೊಲೀಸರು ಹೇಳಿದ್ದಾರೆ.
ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತಪಟ್ಟಿರುವ ಮೂವರ ಪೈಕಿ ಓರ್ವ ವ್ಯಕ್ತಿಯನ್ನು ಜನಾರ್ಧನ ಎಂದು ಗುರ್ತಿಸಲಾಗಿದ್ದು, ಮತ್ತಿಬ್ಬ ಗುರ್ತಿಕೆಗಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಸ್ತುತ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.