ಮೋದಿ ಸರ್ಕಾರ ರಾಷ್ಟ್ರದ ಹಿತಾಸಕ್ತಿಗೆ ಸಲ್ಲದ ಅನೇಕ ಕೆಲಸ ಮಾಡಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಮೋದಿ ಸರ್ಕಾರ ಸಾಕಷ್ಟು ವಿಚಾರಗಳನ್ನು ಮಾಡಿದೆ. ಆದರೆ, ಅದಾವುದೂ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್
Updated on: 
ನವದೆಹಲಿ: ಮೋದಿ ಸರ್ಕಾರ ಸಾಕಷ್ಟು ವಿಚಾರಗಳನ್ನು ಮಾಡಿದೆ. ಆದರೆ, ಅದಾವುದೂ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ದೇಶದಾದ್ಯಂತ ಭಾರತ್ ಬಂದ್ ಆಚರಿಸಲಾಗುತ್ತಿದೆ. ಪ್ರತಿಭಟನೆಗೆ ಕಾಂಗ್ರೆಸ್ ಜೊತೆಗೆ ಸಾಕಷ್ಟು ವಿರೋಧ ಪಕ್ಷಗಳೂ ಕೈಜೋಡಿಸಿವೆ. 
ಕಾಂಗ್ರೆಸ್ ನೇತೃತ್ವದಲ್ಲಿ ರಾಜಧಾನಿ ದೆಹಲಿಯ ರಾಮ್'ಲೀಲಾ ಮೈದಾನದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಹಿಂಗ್ ಸಿಂಗ್, ಸೋನಿಯಾ ಗಾಂಧಿ, ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ. 
ಪ್ರತಿಭಟನೆ ವೇಳೆ ಮಾತನಾಡಿರುವ ಮನಮೋಹನ್ ಸಿಂಗ್ ಅವರು, ದೇಶದ ಹಿತಾಸಕ್ತಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ಮೋದಿ ಸರ್ಕಾರ ಮಾಡಿದೆ. ಇದೀಗ ಸರ್ಕಾರ ಬದಲಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com