2011-12 ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಯಂಗ್ ಇಂಡಿಯನ್ ಪ್ರೈ.ಲಿ ಮೂಲಕ ಗಳಿಸಿರುವ ಆದಾಯದ ಕುರಿತ ವಿವರಗಳನ್ನು ಸಲ್ಲಿಕೆ ಮಾಡಿಲ್ಲ ಎಂಬ ಆರೋಪವಿದ್ದು ಈ ಬಗ್ಗೆ ತಮ್ಮ ಬಳಿ ಸೂಕ್ತ ದಾಖಲೆಗಳೂ ಇವೆ ಎಂದು ಆದಾಯ ತೆರಿಗೆ ಇಲಾಖೆ ವಾದಿಸಿತ್ತು. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರ ಪ್ರಮುಖ ಪಾಲುದಾರಿಕೆಯನ್ನು ಹೊಂದಿರುವ ಯಂಗ್ ಇಂಡಿಯನ್ ಪ್ರೈ.ಲಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್)ನ್ನೂ ಸ್ವಾಧೀನಪಡಿಸಿಕೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಇಬ್ಬರೂ ಕಾಂಗ್ರೆಸ್ ನಾಯಕರ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ.