

ಅಹಮದಾಬಾದ್: ಗುಜರಾತಿನಲ್ಲಿ ನಿರ್ಮಾಣವಾಗುತ್ತಿರುವ ಸ್ವಾತಂತ್ರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಗತ್ತಿನಲ್ಲಿ ಅತ್ಯಂತ ಎತ್ತರದ  ಪ್ರತಿಮೆಯನ್ನು ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.
ಈ ಪ್ರತಿಮೆ 182 ಮೀಟರ್ ಎತ್ತರ ಹೊಂದಿದ್ದು, ದೇಶದ ಏಕತೆ ಹಾಗೂ ಸಾರ್ವಭೌಮತ್ವವನ್ನು ಪ್ರತಿಬಿಂಬಿಸಲಿದೆ. ಏಕತೆಯ ಸಂಕೇತವಾಗಿ ಈ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Advertisement