ಕೈಲಾಸ ಮಾನಸ ಸರೋವರ ಯಾತ್ರೆ ಮೊಟಕುಗೊಳಿಸಿ ಭಾರತ್ ಬಂದ್ ನಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ!

ತೈಲೋತ್ಪನ್ನಗಳ ಮೇಲಿನ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ನಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ದೆಹಲಿಯಲ್ಲಿ ಭಾರತ್ ಬಂದ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ
ದೆಹಲಿಯಲ್ಲಿ ಭಾರತ್ ಬಂದ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ
ನವದೆಹಲಿ: ತೈಲೋತ್ಪನ್ನಗಳ ಮೇಲಿನ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ನಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ಹಿಂದೆ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ ರಾಹುಲ್ ಗಾಂಧಿ ಭಾರತ್ ಬಂದ್ ಹಿನ್ನಲೆಯಲ್ಲಿ ತಮ್ಮ ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ದೆಹಲಿಗೆ ವಾಪಸ್ ಆಗಿದ್ದಾರೆ.  ಕಳೆದ ಆಗಸ್ಟ್ 31ರಂದು ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೆಪ್ಟೆಂಬರ್ 12ರಂದು ವಾಪಸ್ ಆಗಮಿಸಬೇಕಿತ್ತು. ಆದರೆ ತಮ್ಮ ಪಕ್ಷದ ನೇತೃತ್ವದಲ್ಲಿ ಭಾರತ್ ಬಂದ್ ಘೋಷಣೆ ಮಾಡಿರುವುದರಿಂದ ರಾಹುಲ್ ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿ 2 ದಿನ ಮುಂಚಿತವಾಗಿಯೇ ದೆಹಲಿಗೆ ವಾಪಸ್ ಆಗಿದ್ದಾರೆ.
ಅಲ್ಲದೆ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಸೇರಿ ಪಕ್ಷದ ಪ್ರತಿಭಟನಾ ಮೆರವಣಿಗೆಯಲ್ಲೂ ಪಾಲ್ಗೊಳ್ಳುವ ಮೂಲಕ ರಾಹುಲ್ ಬಂದ್ ಗೆ ಬೆಂಬಲ ನೀಡಿದರು. ಇಂದು ಬೆಳಗ್ಗೆ ಪಕ್ಷದ ಹಿರಿಯ ಮುಖಂಡರಾದ ಗುಲಾಂನಬಿ ಆಜಾದ್, ಅಶೋಕ್ ಗೆಹ್ಲೋಟ್ ಮತ್ತು ಆನಂದ್ ಶರ್ಮಾ ಅವರೊಂದಿಗೆ ರಾಜ್ ಘಾಟ್ ಗೆ ತೆರಳಿದ್ದ ರಾಹುಲ್ ಅಲ್ಲಿ ಮಹಾತ್ಮಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಅಲ್ಲಿಯೇ ಸಮೀಪವಿದ್ದ ಪೆಟ್ರೋಲ್ ಬಂಕ್ ಗೆ ತೆರಳಿದ ರಾಹುಲ್ ಅಲ್ಲಿ ಪಕ್ಷದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com