ದಲಿತ ಪದ ಬಳಕೆಯಲ್ಲಿ ಯಾವುದೇ ತಪ್ಪಿಲ್ಲ: ಕೇಂದ್ರ ಸಚಿವ ರಾಮದಾಸ್ ಅಥವಾಲೆ

ದಲಿತ ಪದ ಬಳಕೆ ಮಾಡುವುದರಿಂದ ಯಾವ ತಪ್ಪೂ ಇಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಥವಾಲೆ ಅವರು ಸೋಮವಾರ ಹೇಳಿದ್ದಾರೆ...
ಕೇಂದ್ರ ಸಚಿವ ರಾಮದಾಸ್ ಅಥವಾಲೆ
ಕೇಂದ್ರ ಸಚಿವ ರಾಮದಾಸ್ ಅಥವಾಲೆ
Updated on: 
ಮುಂಬೈ: ದಲಿತ ಪದ ಬಳಕೆ ಮಾಡುವುದರಿಂದ ಯಾವ ತಪ್ಪೂ ಇಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಥವಾಲೆಅವರು ಸೋಮವಾರ ಹೇಳಿದ್ದಾರೆ. 
'ದಲಿತ' ಎಂಬ ಪದ ಬಳಕೆ ಮಾಡಬಾರದೆಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಾಧ್ಯಮಗಳ ಮೇಲೆ ತಡೆ ಹೇರಿತ್ತು. ಈ ಆದೇಶವನ್ನು ಮುಂಬೈ ಹೈಕೋರ್ಟ್ ಎತ್ತಿಹಿಡಿದಿತ್ತು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಥಾವಾಲೆಯವರು, ದಲಿತ ಪದ ಬಳಕೆಯಲ್ಲಿ ಯಾವುದೇ ತಪ್ಪಿಲ್ಲ. ಸರ್ಕಾರದ ಸಲಹೆಯನ್ನು ಪ್ರಶ್ನಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಹೇಳಿದ್ದಾರೆ. 
ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ಪದಗಳನ್ನು ಸರ್ಕಾರದ ದಾಖಲಾತಿಗಳನ್ನು ಬಳಕೆ ಮಾಡಲಾಗುತ್ತಿದೆ. ದಲಿತ ಪದ ಬಳಕೆ ಮಾಡಬೇಕೆಂಬುದು ನಮ್ಮ ಅಭಿಪ್ರಾಯ. ಈ ಕುರಿತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com