ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 1 ರು. ಇಳಿಕೆ: ಮಮತಾ ಬ್ಯಾನರ್ಜಿ ಘೋಷಣೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ.
ಇಂಧನ ಬೆಲೆಗಳ ಮೇಲೆ ಸೆಸ್ ಅನ್ನು ತಗ್ಗಿಸಲು ಕೇಂದ್ರವನ್ನು ಒತ್ತಾಯಿಸಿದ ಮಮತಾ "ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ಒಂದು ರೂಪಾಯಿ ಕಡಿತ ಮಾಡಲು ನಾವು ನಿರ್ಧರಿಸಿದ್ದೇವೆ," ವರದಿಗಾರರಿಗೆ ತಿಳಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧಿನಾಯಕಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾಗತಿಕ ಕಚ್ಚಾ ತೈಲ ಬೆಲೆ ಇಳಿಮುಖವಾಗಿದ್ದರೂ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಸಿದೆ ಎಂದು ಆರೋಪಿಸಿದ್ದಾರೆ.
"ನಮ್ಮ ಸರ್ಕಾರ ಈಚಿನ ವರ್ಷಗಳಲ್ಲಿ ಒಮ್ಮೆಯೂ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಲ್ಲಿ ಮಾರಾಟ ತೆರಿಗೆಯನ್ನು ಅಥವಾ ಸೆಸ್ ಅನ್ನು ಹೆಚ್ಚಳ ಮಾಡಿಲ್ಲ" ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com