ಸಿಎಂ ಪರಿಕ್ಕರ್ ಗೋವಾ ವಿಧಾನಸಭೆ ವಿಸರ್ಜಿಸಬಹುದು: ರಾಜ್ಯಪಾಲರಿಗೆ ಕಾಂಗ್ರೆಸ್ ಪತ್ರ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಾನಸಭೆಯನ್ನು ವಿಸರ್ಜಿಸುವ ಆತಂಕ...
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಾನಸಭೆಯನ್ನು ವಿಸರ್ಜಿಸುವ ಆತಂಕ ವ್ಯಕ್ತಪಡಿಸಿ ಕಾಂಗ್ರೆಸ್ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರಿಶ್ ಚೋಡಂಕರ್ ಅವರು ರಾಜ್ಯಪಾಲ ಮೃದಲಾ ಸಿನ್ಹಾ ಅವರಿಗೆ ಪತ್ರ ಬರೆದಿದ್ದು, ಪರಿಕ್ಕರ್ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಮಿತ್ರ ಪಕ್ಷಗಳ ಮೇಲೆ ಹಿಡಿತ ಕಳೆದುಕೊಂಡಿದ್ದು, ಆಂತರಿಕ ಭಿನ್ನಾಭಿಪ್ರಾಯ ಎದುರಿಸುತ್ತಿರುವುದರಿಂದ ಅವಧಿಗೂ ಮುನ್ನ ವಿಧಾನಸಭೆ ವಿಸರ್ಜಿಸುವ ಸಾಧ್ಯತೆ ಇದೆ. ಇಂತಹ ಸನ್ನಿವೇಶದಲ್ಲಿ ಕಾಂಗ್ರೆಸ್ ಗೆ ಸರ್ಕಾರ ರಚಿಸುವ ಅವಕಾಶ ನೀಡಬೇಕು ಮತ್ತು ಅವಧಿಗೂ ಮುನ್ನ ವಿಧಾನಸಭೆ ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದೆ.
ಪರಿಕ್ಕರ್ ಅವರು ಅಮೆರಿಕದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದು ಕಳೆದ ವಾರ ಗೋವಾಗೆ ವಾಪಸ್ ಆಗಿದ್ದರೂ ಇದುವರೆಗೆ ಕಚೇರಿಗೆ ಬಂದಿಲ್ಲ ಎಂದು ಚೋಡಂಕರ್ ಅವರು ಪತ್ರದಲ್ಲಿ ದೂರಿದ್ದಾರೆ. ಆದರೆ ಬಿಜೆಪಿ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದೆ.
ಪರಿಕ್ಕರ್ ಅವರು ವಿಧಾಸಭೆ ವಿಸರ್ಜಿನೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುವ ಸಾಧ್ಯತೆ ಇದ್ದು, ಮುಂದಿನ ವರ್ಷ ಲೋಕಸಭೆ ಚುನಾವಣೆಯೊಂದಿಗೆ ಗೋವಾ ವಿಧಾನಸಭೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪತ್ರದಲ್ಲಿ ತಿಳಿಸಿದ್ದಾರೆ.
2017ರಲ್ಲಿ ಗೋವಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೂ ಸರ್ಕಾರ ರಚಿಸಲು ನಮಗೆ ಅವಕಾಶ ನೀಡಲಿಲ್ಲ ಎಂದು ಚೋಡಂಕರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com