ತೆಲಂಗಾಣ ಸೇರಿ ಐದು ರಾಜ್ಯಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಆಯೋಗ ಚಿಂತನೆ

ಇತ್ತೀಚಿಗಷ್ಟೇ ಅವಧಿಗೂ ಮುನ್ನ ವಿಸರ್ಜನೆಯಾದ ತೆಲಂಗಾಣ ವಿಧಾನಸಭೆ ಸೇರಿದಂತೆ ಐದು ರಾಜ್ಯಗಳಿಗೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಇತ್ತೀಚಿಗಷ್ಟೇ ಅವಧಿಗೂ ಮುನ್ನ ವಿಸರ್ಜನೆಯಾದ ತೆಲಂಗಾಣ ವಿಧಾನಸಭೆ ಸೇರಿದಂತೆ ಐದು ರಾಜ್ಯಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ ಎಂದು ಆಯೋಗದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ, ತೆಲಂಗಾಣ, ಚತ್ತೀಸ್ ಗಢ ಮತ್ತು ಮಿಜೋರಾಂ ವಿಧಾನಸಭೆಗೆ ಡಿಸೆಂಬರ್ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಇದ್ದು, ಚತ್ತೀಸ್ ಗಢದಲ್ಲಿ ಎರಡು ಹಂತದ ಹಾಗೂ ಇತರೆ ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ತೆಲಂಗಾಣ ವಿಧಾನಸಭೆಗೂ ಡಿಸೆಂಬರ್ ನಲ್ಲೇ ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು, ಈಗಾಗಲೇ ಸಿದ್ಧತೆಗಳು ನಡೆದಿವೆ ಮತ್ತು ಅಕ್ಟೋಬರ್ 8ರಂದು ತೆಲಂಗಾಣ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತೆಲಂಗಾಣ ವಿಧಾನಸಭೆ ಅವಧಿ ಜೂನ್ 2019ಕ್ಕೆ ಅಂತ್ಯಗೊಳ್ಳಬೇಕಿತ್ತು. ಆದರೆ ಕಳೆದ ಗುರುವಾರ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com