ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಜನವರಿಗೆ ಮುಂದೂಡಿಕೆ ಸಾಧ್ಯತೆ

ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಜನವರಿಗೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.
ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಜನವರಿಗೆ ಮುಂದೂಡಿಕೆ
ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಜನವರಿಗೆ ಮುಂದೂಡಿಕೆ
ಶ್ರೀನಗರ: ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಜನವರಿಗೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ. 
ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿರುವುದರಿಂದ ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಶ್ಮೀರದ ಸ್ಥಳೀಯ ಜನತೆಗೆ ವಿಶೇಷ ಹಕ್ಕುಗಳನ್ನು ನೀಡುವ ಆರ್ಟಿಕಲ್ 35ಎಗೆ ಕುತ್ತು ಬಂದಿರುವುದರಿಂದ ತೀವ್ರ ಆತಂಕಕ್ಕೆ ಒಳಗಾಗಿರುವ ಜಮ್ಮು-ಕಾಶ್ಮೀರದ ಪಿಡಿಪಿ, ಎನ್ ಸಿ ಪಕ್ಷಗಳು ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿವೆ. 
ಚುನಾವಣೆ ಎದುರಿಸುವುದಕ್ಕೆ ಅನುಕೂಲವಾದ ವಾತಾವರಣ ಇಲ್ಲದೇ ಇರುವುದರಿಂದ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com