ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ಗೆ ವಿಚಾರಣೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಯ, ನಾನು ಭಾರತದಿಂದ ಲಂಡನ್ಗೆ ಹೊರಡುವ ಮುನ್ನ ಹಣಕಾಸು ಸಚಿವರನ್ನು ಭೇಟಿ ಮಾಡಿ, ಪ್ರಕರಣ ಇತ್ಯರ್ಥ ಪಡಿಸಲು ಇಚ್ಛೆ ವ್ಯಕ್ತಪಡಿಸಿದ್ದೆ. ಅಲ್ಲದೆ ಬ್ಯಾಂಕ್ಗಳಿಗೆ ಸಲ್ಲಿಸಿದ್ದ ಮನವಿಗಳನ್ನು ತಿರಸ್ಕರಿಸಲಾಗಿತ್ತು ಎಂದಿದ್ದಾರೆ.