ದೇಶ

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಜಯಭೇರಿ, ಎನ್ಎಸ್ ಯುಐಗೆ ಒಂದು ಸ್ಥಾನ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಗುರುವಾರ ನಡೆದ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದ್ದು,...

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಜಯಭೇರಿ, ಎನ್ಎಸ್ ಯುಐಗೆ ಒಂದು ಸ್ಥಾನ
ಗೆದ್ದ ಅಭ್ಯರ್ಥಿಗಳು
Published On :
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ  ಗುರುವಾರ ನಡೆದ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದ್ದು, ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಭರ್ಜರಿ ಜಯ ಗಳಿಸಿದ್ದು, ಅಧ್ಯಕ್ಷ ಸೇರಿದಂತೆ ಪ್ರಮುಖ ಮೂರು ಹುದ್ದೆಗಳನ್ನು ತನ್ನದಾಗಿಸಿಕೊಂಡಿದೆ.
ಇನ್ನು ಕಾಂಗ್ರೆಸ್‌ ಬೆಂಬಲಿತ ಎನ್‌ಎಸ್‌ಯುಐ ಜಿದ್ದಾ ಜಿದ್ದಿ ನ ಹೋರಾಟದಲ್ಲಿ ಒಂದು ಸ್ಥಾನ ಪಡೆದಿದೆ.
ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಎಬಿವಿಪಿ ಜಯಭೇರಿ ಭಾರಿಸಿದ್ದು, ಅಧ್ಯಕ್ಷ ,ಉಪಾಧ್ಯಕ್ಷ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನವನ್ನು ಎಬಿವಿಪಿ ಪಾಲಾಗಿದೆ. ಒಂದು ಸ್ಥಾನ ಕಾರ್ಯದರ್ಶಿ ಎನ್‌ಎಸ್‌ಯುಐ ಗೆದ್ದಿದೆ. 
ಎಬಿವಿಪಿಯ ಅಂಕಿವ್ ಬಸೋಯ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ ,ಉಪಾಧ್ಯಕ್ಷರಾಗಿ ಶಕ್ತಿ ಸಿಂಗ್ ಆಯ್ಕೆಯಾಗಿದ್ದಾರೆ. 
ಎನ್ಎಸ್ ಯುಐ ನ ಆಕಾಶ್ ಚೌಧರಿ ಅವರು ಕಾರ್ಯದರ್ಶಿಯಾಗಿ ಹಾಗೂ ಎಬಿವಿಪಿಯ ಜ್ಯೋತಿ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.