ಗೋವಾ ಸಿಎಂ ಪರಿಕ್ಕರ್ ಕ್ಯಾಂಡೊಲಿಮ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಕ್ಯಾಂಡೋಲಿಮ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್
ಪಣಜಿ: ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಕ್ಯಾಂಡೋಲಿಮ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಈ ಕುರಿತಂತೆ ಮಾಹಿತಿ ನೀಡಿರುವ ಉಪ ಸ್ಪೀಕರ್ ಲೊಬೋ ಅವರು, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ನಿನ್ನೆ ಮಧ್ಯಾಹ್ನ ಕ್ಯಾಂಡೋಲಿಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ರೋಗದಿಂದ ಬಳಲುತ್ತಿದ್ದು, ಇದೇ ವರ್ಷ ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಎರಡೂವರೆ ತಿಂಗಳ ಸುದೀರ್ಘ ಚಿಕಿತ್ಸೆ ಬಳಿ ಜೂನ್ ತಿಂಗಳಿನಲ್ಲಿ ಭಾರತಕ್ಕೆ ವಾಪಸ್ಸಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com