ಮಹಾ ಕೋರ್ಟ್ ನಿಂದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಬಂಧನ ವಾರಂಟ್

2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ಅಮರಾವತಿ: 2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹಾಗೂ ಇತರೆ 15 ಮಂದಿ ವಿರುದ್ಧ ಮಹಾರಾಷ್ಟ್ರ ಕೋರ್ಟ್ ಗುರುವಾರ ಬಂಧನ ವಾರಂಟ್ ಜಾರಿ ಮಾಡಿದೆ.
ನಾಂದೇಡ್ ಜಿಲ್ಲೆಯ ಧರ್ಮಾಬಾದ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್, ಆಂಧ್ರ ಸಿಎಂ ಹಾಗೂ ಇತರರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದು, ಸೆಪ್ಟೆಂಬರ್ 21ರೊಳಗೆ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷದಲ್ಲಿದ್ದಾಗ ಗೋದಾವರಿ ನದಿಗೆ ಅಡ್ಡವಾಗಿ ಮಹಾರಾಷ್ಟ್ರ ಸರ್ಕಾರ ನಿರ್ಮಿಸುತ್ತಿರುವ ಬಾಬ್ಲಿ ಅಣೆಕಟ್ಟು ಯೋಜನೆಯನ್ನು ವಿರೋಧಿಸಿ ಆಂಧ್ರಪ್ರದೇಶ ಗಡಿ ಜಿಲ್ಲೆ ನಾಂದೇಡ್‌ ನ ಧರ್ಮಾಬಾದ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ ಪೊಲೀಸರು, ನಾಯ್ಡು ಹಾಗೂ ಟಿಡಿಪಿ ಕಾರ್ಯಕರ್ತರನ್ನು ಬಂಧಿಸಿದ್ದರು.
ಮಹಾರಾಷ್ಟ್ರವು ತನ್ನ ಪಾಲಿನ ನೀರಿಗಿಂತ ಹೆಚ್ಚು ಕಬಳಿಸುತ್ತಿದ್ದು, ಇದರಿಂದಾಗಿ ಆಂಧ್ರಪ್ರದೇಶದ ತೆಲಂಗಾಣ ಪ್ರಾಂತ್ಯದ ರೈತರ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಇದನ್ನು ತಡೆಯಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಅದಕ್ಕಾಗಿ ಜೀವ ಕೊಡಲೂ ಸಿದ್ಧ ಎಂದು ನಾಯ್ಡು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com