ಮಮತಾ ಚಿಕಾಗೋ ಭೇಟಿಗೆ ಕೇಂದ್ರ ನಕಾರ: ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ವರದಿಗಳನ್ನು ವಿದೇಶಾಂಗ ಸಚಿವಾಲಯ ಶುಕ್ರವಾರ ತಿರಸ್ಕರಿಸಿದೆ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನವದೆಹಲಿ: ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ವರದಿಗಳನ್ನು ವಿದೇಶಾಂಗ ಸಚಿವಾಲಯ ಶುಕ್ರವಾರ ತಿರಸ್ಕರಿಸಿದೆ.  
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಸಚಿವಾಲಯ, ಚಿಕಾಗೋದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿಯವರು ಭೇಟಿ ನೀಡುವ ಕುರಿತು ಯಾವುದೇ ರೀತಿಯ ಮನವಿಗಳು ಸಚಿವಾಲಯಕ್ಕೆ ಬಂದಿರಲಿಲ್ಲ. ಹೀಗಾಗಿ ಅನುಮತಿ ನಿರಾಕರಿಸಿರುವ ವರದಿಗಳು ಆಧಾರರಹಿತವಾದದ್ದು ಎಂದು ಹೇಳಿದೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಟಿಎಂಸಿ ನಾಯಕ ಡೆರೆಕ್ ಓಬ್ರಿನ್ ಅವರು, ವಿವೇಕಾನಂದ ವೇದಾಂತ ಸಂಸ್ಥೆ ಮುಖ್ಯಮಂತ್ರಿ ಮಮತಾ ಅವರನ್ನು ಆಹ್ವಾನಿಸಿತ್ತು. ಇದಕ್ಕೆ ಸಿಎಂ ಕೂಡ ಒಪ್ಪಿಗೆ ನೀಡಿದ್ದರು. ಆದರೆ, ಬಿಜೆಪಿ- ಆರ್'ಎಸ್ಎಶ್ ಪ್ರಮುಖ ಕಾರ್ಯಕ್ರಮಗಳಲ್ಲಿ ತಮ್ಮವರನ್ನೇ ಆಯ್ಕೆ ಮಾಡುತ್ತವೆ. ಇದೇ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಭಾಗವಹಿಸಿದ್ದರು. ಹೀಗಾಗಿ ಚಿಕಾಗೋ ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಡ ಹಾಕಿದ್ದರಿಂದ ಮಮತಾ ಅವರು ಪ್ರವಾಸ ಕೈಬಿಟ್ಟಿದ್ದಾರೆಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com