ಆರ್ಥಿಕತೆ ಕುರಿತು ಮೋದಿ-ಜೇಟ್ಲಿ ಚರ್ಚೆ: ಸೆ.15 ರಂದು ಮತ್ತೊಂದು ಸುತ್ತಿನ ಸಭೆ

ರೂಪಾಯಿ ಮೌಲ್ಯ ನಿರಂತರ ಕುಸಿತ ಕಾಣುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿತ್ತ ಸಚಿವ ಅರುಣ್ ಜೇಟ್ಲಿ ಜೊತೆಗೆ ಸಭೆ ನಡೆಸಿದ್ದಾರೆ.
ಆರ್ಥಿಕತೆ ಕುರಿತು ಮೋದಿ-ಜೇಟ್ಲಿ ಚರ್ಚೆ: ಸೆ.15 ರಂದು ಮತ್ತೊಂದು ಸುತ್ತಿನ ಸಭೆ
ಆರ್ಥಿಕತೆ ಕುರಿತು ಮೋದಿ-ಜೇಟ್ಲಿ ಚರ್ಚೆ: ಸೆ.15 ರಂದು ಮತ್ತೊಂದು ಸುತ್ತಿನ ಸಭೆ
ನವದೆಹಲಿ: ರೂಪಾಯಿ ಮೌಲ್ಯ ನಿರಂತರ ಕುಸಿತ ಕಾಣುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿತ್ತ ಸಚಿವ ಅರುಣ್ ಜೇಟ್ಲಿ ಜೊತೆಗೆ ಸಭೆ ನಡೆಸಿದ್ದಾರೆ. 
ವಿತ್ತ ಸಚಿವ ಅರುಣ್ ಜೇಟ್ಲಿ, ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ ನಡೆಸಿದ್ದು, ಸೆ.15 ರಂದು ಆರ್ಥಿಕತೆಗೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ಸಭೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಉದ್ದೇಶಿಸಿದ್ದಾರೆ. 
ಡಾಲರ್ ಎದುರು ರೂಪಾಯಿ ಮೌಲ್ಯ ಕ್ಷೀಣಿಸುತ್ತಿರುವುದು ಹಾಗೂ ಏರುತ್ತಿರುವ ಪೆಟ್ರೋಲ್ ದರದಿಂದ ಉಂಟಾಗಿರುವ ಬೃಹತ್ ಆರ್ಥಿಕ ಸವಾಲುಗಳನ್ನು ಎದುರಿಸುವುದಕ್ಕೆ ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಸಾಧ್ಯತೆಗಳ ಬಗ್ಗೆ ನಾಳೆ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. 
ಸೆ.15 ರಂದು ನಡೆಯಲಿರುವ ಸಭೆಯಲ್ಲಿ ಕಂದಾಯ ಇಲಾಖೆ ಕಾರ್ಯದರ್ಶಿಯಾಗಿರುವ ಹಸ್ಮುಖ್ ಅಧಿಯಾ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಅರುಣ್ ಜೇಟ್ಲಿ ಭಾಗವಹಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಬಜೆಟ್ ನ್ನೂ ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com