2014 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ 2019ರಲ್ಲಿ ಪುನರಾವರ್ತನೆ ಅಸಾಧ್ಯ: ಮಮತಾ ಬ್ಯಾನರ್ಜಿ

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಕೊಲ್ಕೊತಾ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
2014ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನೀಡಿದ್ದ ಆಶ್ವಾಸನೆ ಈಡೇರಿಲ್ಲ, ಹೀಗಾಗಿ ಮುಂದಿನ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂದು ಹೇಳಿದ್ದಾರೆ
ಬಿಜೆಪಿ ಹಿಂದೂ ಉಗ್ರತ್ವ ಜಾರಿಗೆ ತರುತ್ತದೆ,ಹಲವು ಜನರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಟಿವಿ ಚಾನೆಲ್ ವೊಂದರಲ್ಲಿ ಹೇಳಿಕೆ ನೀಡಿದ್ದಾರೆ.
2014 ರ ಲೋಕಸಭೆ ಚುನಾವಣೆಯಲ್ಲಿ ಶೇ, 31 ರಷ್ಟು ಮತ ಪಡೆದ ಬಿಜೆಪಿ 283 ಸೀಟು ಗೆದ್ದಿತ್ತು. ಆದರೆ ಇದು 2019ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುನಾರಾವರ್ತನೆಯಾಗಲು ಸಾಧ್ಯವಿಲ್ಲ, ಬಿಜೆಪಿಯವರು ಇದುವರೆಗೂ ಯಾವುದೇ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ.
ದೇಶವನ್ನು ಒಗ್ಗೂಡಿಸಬೇಕು, ನಾವು ಉಗ್ರ ಹಿಂದೂತ್ವವನ್ನು ಖಂಡಿಸುತ್ತೇವೆ , 2014ರ ಚುನಾವಣೆ ನಂತರ ಅಹಂಕಾರದಿಂದ ವರ್ತಿಸುತ್ತಿದೆ, ದೇಶದಲ್ಲಿ ತೈಲಬೆಲೆ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com