
ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಈಗ್ಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಪಕ್ಷದ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರನ್ನಾಗಿ ಮಾಜಿ ವಿತ್ತ ಸಚಿವ ಚಿದಂಬರಂ ಹಾಗೂ ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಮಾಜಿ ರಕ್ಷಣಾ ಸಚಿವ ಎ. ಕೆ. ಆಂಟನಿ ಅವರನ್ನು ಸಮನ್ವಯ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಈ ಮಧ್ಯೆ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಪವನ್ ಖೇರ್ ಅವರನ್ನು ಸಮನ್ವಯ ಸಮಿತಿಯ ಸಂಚಾಲಕರನ್ನಾಗಿ, ಆನಂದ್ ಶರ್ಮಾ ಅವರನ್ನು ಪ್ರಚಾರ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ವಿವಿಧ ಕಾರ್ಯಕಾರಿ ಸಮಿತಿಗಳ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ.
Advertisement