ಜಮ್ಮು-ಕಾಶ್ಮೀರ; ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ; ಮೂವರು ಉಗ್ರರು ಹತ

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ವಾಜಿಗುಂಡ್ ಪಟ್ಟಣದ ಚೌಗಮ್ ಪ್ರದೇಶದಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ...
ಗುಂಡಿನ ಚಕಮಕಿ ಸ್ಥಳದಲ್ಲಿ ಪೊಲೀಸರು
ಗುಂಡಿನ ಚಕಮಕಿ ಸ್ಥಳದಲ್ಲಿ ಪೊಲೀಸರು

ಕುಲ್ಗಾಮ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ವಾಜಿಗುಂಡ್ ಪಟ್ಟಣದ ಚೌಗಮ್ ಪ್ರದೇಶದಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

ಈ ಪ್ರದೇಶದಲ್ಲಿ ಇನ್ನೂ ಕೂಡ ಗುಂಡಿನ ಚಕಮಕಿ ಸದ್ಯ ನಿಂತಿದ್ದು ಶೋಧ ಕಾರ್ಯ ಮುಂದುವರಿದಿದೆ. ಉಗ್ರಗಾಮಿಗಳ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಯೋಧರು ನಿನ್ನೆ ರಾತ್ರಿಯಿಂದ ಚೌಗಮ್ ಗ್ರಾಮವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದರು.

ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ನಿಖರ ಮಾಹಿತಿ ಪಡೆದ ಯೋಧರು ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಮೃತ ಮೂವರು ಉಗ್ರರ ಶವಗಳನ್ನು ಇನ್ನೂ ಹೊರತೆಗೆದಿಲ್ಲ.

ಬರಮುಲ್ಲಾ-ಕ್ವಾಜಿಗುಂಡ್ ನಡುವೆ ರೈಲು ಸಂಚಾರ ಸೇವೆಯನ್ನು ರದ್ದುಗೊಳಿಸಲಾಗಿದೆ. ಕುಲ್ಗಾಮ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕೂಡ ರದ್ದುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com