ವೈದ್ಯಕೀಯ ತಪಾಸಣೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ತೆರಳಿದ ಮನೋಹರ್ ಪರ್ರಿಕರ್

ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಅಖಿಲ ಭಾರತ ...
ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್
ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ಶನಿವಾರ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

62 ವರ್ಷದ ಮನೋಹರ ಪರ್ರಿಕರ್ ಪ್ರಸ್ತುತ ಉತ್ತರ ಗೋವಾದ ಕಾಂಡೊಲಿಮ್ ನ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾಂಕ್ರಿಯಾಟಿಕ್ ಕಾಯಿಲೆ(ಆಹಾರ ಜೀರ್ಣಕ್ರಿಯೆ ಸಮಸ್ಯೆ)ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಏಮ್ಸ್ ಆಸ್ಪತ್ರೆಗೆ ಹೆಚ್ಚಿನ ವೈದ್ಯಕೀಯ ತಪಾಸಣೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿ ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಪರ್ರಿಕರ್ ಅವರು ಅಮೆರಿಕಾದಲ್ಲಿ ಸತತ ಮೂರು ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com