ನವದೆಹಲಿ: ಎಂಜಿನಿಯರ್ಸ್ ದಿನಾಚರಣೆ ಹಾಗೂ ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನದ ಹಿನ್ನೆಲೆಯಲ್ಲಿ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಕನ್ನಡಿಗರ ಹೆಮ್ಮೆಯಾಗಿರುವ ವಿಶ್ವೇಶ್ವರಯ್ಯ ಅವರು ಆಧುನಿಕ ಭಾರತದ ನಿರ್ಮಾಣಕ್ಕೆ ತಳಪಾಯ ಹಾಕಿದವರು. ಎಂಜಿನಿಯರ್ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆಯ ಸ್ಮರಣೆಗಾಗಿ ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನವನ್ನು ಭಾರತದಲ್ಲಿ ಎಂಜಿನಿಯರ್ಸ್ ದಿನವನ್ನಾಗಿ ಆಚರಿಸಲಾಗುತ್ತಿದೆ.
1800ನೇ ಇಸವಿಯಲ್ಲಿ ಸರ್, ಎಂ ವಿಶ್ವೇಶ್ವರಯ್ಯ ಅವರು ಕರ್ನಾಟಕದ ಮುದ್ದೇನಹಳ್ಳಿಯಲ್ಲಿ ಜನಿಸಿದರು.