'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ಚಾಲನೆ: ಗಾಂಧೀಜಿ ಕನಸು ನನಸಾಗಿಸಲು ಜನತೆಗೆ ಕರೆ

ಸಮಾಜದ ಎಲ್ಲಾ ವರ್ಗಗಳು ಮತ್ತು ದೇಶದ ಪ್ರತಿ ಭಾಗಗಳ ಜನರು ಸ್ವಚ್ಛತಾ ಅಭಿಯಾನದಲ್ಲಿ ...
ಸ್ವಚ್ಛ ಕಾರ್ಯದಲ್ಲಿ ತೊಡಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ
ಸ್ವಚ್ಛ ಕಾರ್ಯದಲ್ಲಿ ತೊಡಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on

ನವದೆಹಲಿ: ಸಮಾಜದ ಎಲ್ಲಾ ವರ್ಗಗಳು ಮತ್ತು ದೇಶದ ಪ್ರತಿ ಭಾಗಗಳ ಜನರು ಸ್ವಚ್ಛತಾ ಅಭಿಯಾನದಲ್ಲಿ ಕೈಜೋಡಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ 9 ಕೋಟಿ ಶೌಚಾಲಯಗಳು ಮತ್ತು ನಾಲ್ಕೂವರೆ ಲಕ್ಷ ಗ್ರಾಮಗಳು ಬಯಲು ಶೌಚ ಮುಕ್ತ ಎಂದು ಘೋಷಿಸಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಇಂದು ದೆಹಲಿಯಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಕಸ ಗುಡಿಸಿ ಸ್ವಚ್ಛ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಸ್ವಚ್ಛತಾ ಸೇವೆ ಅಭಿಯಾನ ಮಹಾತ್ಮಾ ಗಾಂಧಿಯವರ ಹುಟ್ಟುಹಬ್ಬ ಅಕ್ಟೋಬರ್ 2ರವರೆಗೆ ಮುಂದುವರಿಯಲ್ಲಿದ್ದು, ನಮ್ಮ ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರ ಸ್ವಚ್ಛ ಭಾರತ ಕನಸನ್ನು ನನಸು ಮಾಡಲು ದೇಶದ ಜನರು ತಮ್ಮನ್ನು ತಾವು ಸ್ವಚ್ಛತೆಗೆ ಸಮರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅವರು ಇಂದು ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ದೇಶಾದ್ಯಂತ ಪ್ರಮುಖ ಧಾರ್ಮಿಕ ನಾಯಕರ ಜೊತೆ ಮತ್ತು ಗಣ್ಯರ ಜೊತೆ ಸಂವಾದ ನಡೆಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಮಿತಾಬ್ ಬಚ್ಚನ್, ರತನ್ ಟಾಟಾ ಮೊದಲಾದವರು ಸ್ವಚ್ಛ ಅಭಿಯಾನದಲ್ಲಿ ತಮ್ಮ ಕೆಲಸದ ಅನುಭವಗಳನ್ನು ಹಂಚಿಕೊಂಡರು.

ದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶೇಕಡಾ 40ರಿಂದ ಶೇಕಡಾ 90ರಷ್ಟು ಶುಚಿತ್ವವಾಗಿದೆ. 450ಕ್ಕೂ ಹೆಚ್ಚು ಜಿಲ್ಲೆಗಳು ಬಯಲು ಶೌಚ ಮುಕ್ತವಾಗಿದೆ ಎಂದರೆ ಆಶ್ಚರ್ಯವಾಗಬಹುದು. 20 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಳೆದ ನಾಲ್ಕು ವರ್ಷಗಳಲ್ಲಿ ಬಯಲು ಶೌಚ ಮುಕ್ತವಾಗಿದೆ. ಸ್ವಚ್ಛ ಹಿ ಸೇವಾ ಅಭಿಯಾನ ಆರಂಭದ ದಿನವಾದ ಇಂದು ಐತಿಹಾಸಿಕ ದಿನವಾಗಿದೆ ಎಂದು ಪ್ರಧಾನಿ ಬಣ್ಣಿಸಿದರು.

ಉತ್ತರ ಪ್ರದೇಶ ರಾಜ್ಯ ಅಕ್ಟೋಬರ್ 2 ಇದೇ ವರ್ಷ ಬಯಲು ಶೌಚ ಮುಕ್ತ ರಾಜ್ಯ ಎಂದು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು.ಕಳೆದ ವರ್ಷ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1.36 ಕೋಟಿಗೂ ಅಧಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು. ಇದಕ್ಕೆ ಪ್ರಧಾನಿ ಪ್ರಶಂಸೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕರ್ನಾಟಕ,ಕೇರಳ, ತಮಿಳುನಾಡು, ರಾಜಸ್ತಾನ, ಹರ್ಯಾಣ, ಬಿಹಾರ, ಅಸ್ಸಾಂನ ಜನತೆಯೊಂದಿಗೆ ಸಂವಾದ ನಡೆಸಿದರು.ಪೊಂಗಾಂಗ್ ಕೆರೆ ಮತ್ತು ಸುತ್ತಮುತ್ತಲ ಕೆರೆ ಮತ್ತು ಧಾರ್ಮಿಕ ಸ್ಥಳಗಳನ್ನು ಸ್ವಚ್ಛಗೊಳಿಸುತ್ತಿರುವ ಇಂಡೊ-ಟಿಬೆಟಿಯನ್ ಗಡಿ ಭದ್ರತಾ ಸಿಬ್ಬಂದಿಯೊಂದಿಗೆ ಕೂಡ ಮಾತನಾಡಿ ಅಲ್ಲಿನ ಮಾಹಿತಿ ಪಡೆದರು. ಗುರುದ್ವಾರದ ಸಿಖ್ ಧಾರ್ಮಿಕ ಗುರುಗಳು ಮತ್ತು ಅಜ್ಮಿರ್ ಶರೀಫ್ ದರ್ಗಾದ ಮುಸ್ಲಿಂ ಮುಖಂಡರೊಂದಿಗೆ ಕೂಡ ಸಂವಾದ ನಡೆಸಿದರು.

ತಮ್ಮ ಸರ್ಕಾರ ಕಸದಿಂದ ಸಂಪತ್ತು ಗಳಿಸುವ ಕುರಿತು ಕಾರ್ಯತತ್ಪರವಾಗಿದ್ದು ಜನರು ಅದಕ್ಕೆ ಕೈಜೋಡಿಸಬೇಕು, ಸರ್ಕಾರವೊಂದರಿಂದಲೇ ಈ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com