ಸಂಗ್ರಹ ಚಿತ್ರ
ದೇಶ
ನಿಸ್ವಾರ್ಥ ಸೇವೆ: ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಹೊತ್ತೊಯ್ದ ಪೊಲೀಸ್ ಅಧಿಕಾರಿ, ಫೋಟೋ ವೈರಲ್!
ಮಥುರಾ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ಹೊತ್ತೊಯ್ದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...
ಆಗ್ರಾ: ಮಥುರಾ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ಹೊತ್ತೊಯ್ದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರ್ಕಾರಿ ರೈಲ್ವೆ ಪೊಲೀಸ್(ಜಿಆರ್ಪಿ) ಅಧಿಕಾರಿ ಸೋನು ಕುಮಾರ್ ರಜೋರಿ ಅವರು ಜನ ದಟ್ಟಣೆಯಿಂದ ತುಂಬಿದ್ದ ರೈಲ್ವೆ ನಿಲ್ದಾಣದಲ್ಲಿ ನಡೆಸಲು ಸಾಧ್ಯವಾಗದೆ ನೋವಿನಿಂದ ನರಳುತ್ತಿದ್ದ ಗರ್ಭಿಣಿ ಮಹಿಳೆಯನ್ನು ಆಂಬುಲೇನ್ಸ್ ಕಾಯದೆ ಪಕ್ಕದಲ್ಲೇ ಇದ್ದ ಆಸ್ಪತ್ರೆಗೆ ಕರೆದೊಯ್ದಿದ್ದು ಸ್ಟ್ರೆಕ್ಚರ್ ಸಿಗದ ಹಿನ್ನೆಲೆಯಲ್ಲಿ 100 ಮೀಟರ್ ವರೆಗೆ ಕೈಯಲ್ಲೇ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿ ಸಾರ್ಥಕತೆ ಮೆರೆದಿದ್ದಾರೆ.
ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಗರ್ಭಿಣಿ ಭವಾನಿ ಎಂಬುವರು ಗಂಡು ಮಗುವಿಗೆ ಜನ್ಮ ನೀಡಿದ್ದು ತಾಯಿ ಮಗು ಸುರಕ್ಷಿತರಾಗಿದ್ದಾರೆ. ಗರ್ಭಿಣ ಮಹಿಳೆಯನ್ನು ಬರಿಗೈಯಲ್ಲಿ ಹೊತ್ತೊಯ್ಯುತ್ತಿರುವುದನ್ನು ಸ್ಥಳೀಯರೊಬ್ಬರು ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ.
ಮಹಿಳೆ ಮತ್ತು ಮಗು ಆರೋಗ್ಯವಾಗಿರುವುದು ಸಂತೋಷ ತಂದಿದೆ. ಗರ್ಭಿಣಿ ಮಹಿಳೆ ಮತ್ತು ಆತನ ಗಂಡನಿಗೆ ಇದು ಹೊಸ ಜಾಗವಾಗಿದ್ದರಿಂದ ಎಲ್ಲಿಗೆ ಹೋಗಬೇಕು ಎಂದು ತೋಚದೆ ಚಡಪಡಿಸುತ್ತಿದ್ದರು. ಹೀಗಾಗಿ ನಾನು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದೆ ಎಂದು ಸೋನು ಕುಮಾರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ