2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಚುನಾವಣಾ ಕಾರ್ಯತಂತ್ರ ರೂಪಿಸಿ ಪ್ರಶಾಂತ್ ಕಿಶೋರ್ ದೇಶಾದ್ಯಂತ ಸುದ್ದಿಯಾಗಿದ್ದರು. ನಂತರದ ದಿನಗಳಲ್ಲಿ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟದ ಪರ, ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಚುನಾವಣಾ ಕಾರ್ಯತಂತ್ರ ರೂಪಿಸಿದ್ದರು. ಬಿಹಾರದ ಯಶಸ್ಸಿನ ಹೊರತಾಗಿ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರ ಫಲಿಸಿರಲಿಲ್ಲ.