ನವದೆಹಲಿ: ಮುಂಬರುವ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲು ಸಾಧ್ಯವಿಲ್ಲ, ಹೀಗಾಗಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ 134 ಕ್ಷೇತ್ರಗಳ ಪೈಕಿ 100 ಸ್ಥಾನಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ, ಬಿಹಾರ, ಜಾರ್ಖಂಡ್, ಮತ್ತು ಉತ್ತರ ಪ್ರದೇಶಗಳಲ್ಲಿ ಒಟ್ಟು ಬಿಜೆಪಿ 115 ಕ್ಷೇತ್ರಗಳನ್ನು ಗೆದ್ದಿದೆ, ಮುಂದಿನ ಚುನಾವಣೆಯಲ್ಲಿ 100 ಸೀಟುಗಳನ್ನು ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.