ಅತ್ತ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರೆ, ಇತ್ತ ರೆವಾರಿ ಮಹಾಪಂಚಾಯತ್ ಅತ್ಯಾಚಾರ ಆರೋಪಿಗಳ ಪರ ಯಾವುದೇ ವಕೀಲರೂ ವಕಾಲತ್ತು ವಹಿಸಬಾರದು ಎಂದು ಆದೇಶ ಹೊರಡಿಸಿದೆ. 25 ಗ್ರಾಮಗಳನ್ನು ಹೊಂದಿರುವ ಮಹಾಪಂಚಾಯತ್ ಈ ಆದೇಶ ಹೊರಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಪತ್ರವನ್ನೂ ಬರೆಯಲಾಗಿದೆ.