ಕೋಲ್ಕತಾ: ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಅವರ ಬೆಂಬಲಿಗರ ಮೇಲೆ ಸೋಮವಾರ ಪೂರ್ವ ಮಿಡ್ನಾಪುರದಲ್ಲಿ ದಾಳಿ ನಡೆಸಲಾಗಿದ್ದು, ಇದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಕೃತ್ಯವೆಂದು ಆರೋಪಿಸಲಾಗಿದೆ.
ವರದಿಗಳ ಪ್ರಕಾರ, ದಾಳಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಮತ್ತು ಇತರ ಐವರು ಗಾಯಗೊಂಡಿದ್ದು, ಘೋಷ್ ಅವರ ಕಾರನ್ನು ಧ್ವಂಸಗೊಳಿಸಲಾಗಿದೆ.
ನಾನು ಸಾರ್ವಜನಿಕ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ನ್ನನ್ನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಘೋಷ್ ಹೇಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.
ಕಾಂತಿ ಕ್ಷೇತ್ರದ ಟಿಎಂಸಿ ಸಂಸದ ದ್ವಿವೇಂದು ಅಧಿಕಾರಿ ಅವರೇ ಈ ದಾಳಿಗೆ ಕಾರಣ ಎಂದು ಘೋಷ್ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ದ್ವಿವೇಂದು ಅಧಿಕಾರಿ ತಳ್ಳಿಹಾಕಿದ್ದಾರೆ.