

ಚಂಡೀಗಡ : ರಿವಾರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ 19 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಕೋಚಿಂಗ್ ತರಗತಿಯ ಮುಖ್ಯಸ್ಥೆ 19 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಬೆನ್ನಲ್ಲೇ ಇಂದು ಮತ್ತೊಂದು ಅತ್ಯಾಚಾರ ಪ್ರಕರಣ ರಿವಾರಿ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಈ ಸಂಬಂಧ 17 ವರ್ಷದ ಬಾಲಕಿ ತನ್ನ ಮಾಜಿ ಶಾಲಾ ಸಹಪಾಠಿ ವಿರುದ್ಧ ದೂರು ದಾಖಲಿಸಿದ್ದಾಳೆ ಎಂದು ದಾರುಹೇರಾ ಠಾಣಾಧಿಕಾರಿ ಇನ್ಸ್ ಪೆಕ್ಟರ್ ಜಗದೀಶ್ ಪರ್ಶದ್ ತಿಳಿಸಿದ್ದಾರೆ.
ತನ್ನ ಮಾಜಿ ಸಹಪಾಠಿಯಿಂದ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ಆಕೆ ತಿಳಿಸಿದ್ದು, ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವುದಾಗಿ ಅವರು ಹೇಳಿದ್ದಾರೆ.
ಹರಿಯಾದ ಜಿಂದ್ ಜಿಲ್ಲೆಯಲ್ಲಿ ತನ್ನ ಮೇಲೆ ಇಬ್ಬರು ಅತ್ಯಾಚಾರ ನಡೆಸಿದ್ದಾರೆ ಎಂದು ರಿವಾರಿ ಜಿಲ್ಲೆಯ ಮತ್ತೊಬ್ಬ ಮಹಿಳೆ ಆರೋಪಿದ್ದಾರೆ.
ಸರ್ಕಾರದಿಂದ ಸನ್ಮಾನಿಸಲ್ಪಿಟ್ಟಿದ್ದ ರಿವಾರಿಯ ಟಾಪರ್ 19 ವರ್ಷದ ಯುವತಿಯನ್ನು ಕಳೆದ ಬುಧವಾರ ಬಸ್ ನಿಲ್ದಾಣದಿಂದ ಅಪಹರಿಸಿದ್ದ ದುಷ್ಕರ್ಮಿಗಳು ಕೃಷಿ ಜಮೀನೊಂದರಲ್ಲಿ ಅತ್ಯಾಚಾರ ನಡೆಸಿದ್ದರು.
ಸಾಮೂಹಿಕ ಅತ್ಯಾಚಾರದ ಬಗ್ಗೆ ನೈತಿಕ ಹೊಣೆ ಹೊತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ.