ರಾಫೆಲ್ ಡೀಲ್; ರಕ್ಷಣಾ ಸಚಿವರಿಂದ ಎಚ್ಎಲ್ಎಲ್ ಗೆ ಕಳಂಕ ತರುವ ಕೆಲಸ: ಆಂಟನಿ

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್...
ಎ.ಕೆ.ಆಂಟನಿ
ಎ.ಕೆ.ಆಂಟನಿ
ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತ್ಯ ಮರೆಮಾಚುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಮಂಗಳವಾರ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ರಾಫೆಲ್ ಡೀಲ್ ನಲ್ಲಿ ರಾಷ್ಟ್ರೀಯ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸದೆ ರಾಜಿ ಮಾಡಿಕೊಂಡಿದೆ ಎಂದು ಆಂಟನಿ ಆರೋಪಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಂಟನಿ, 2013ರಲ್ಲಿ ಯುಪಿಎ ಹಸ್ತಕ್ಷೇಪದಿಂದ ಡೀಲ್ ರದ್ದಾಗಿತ್ತು ಎಂಬ ಸೀತಾರಾಮನ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಸೀತಾರಾಮನ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್)ಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ರಕ್ಷಣಾ ಸಚಿವರು ಆರೋಪಿಸಿದ್ದಾರೆ.
ರಾಫೆಲ್ ಯುದ್ಧ ವಿಮಾನದ ವೆಚ್ಚ ಯುಪಿಎ ಮಾಡಿಕೊಂಡಿದ್ದ ಒಪ್ಪಂದಕ್ಕಿಂತ ಕಡಿಮೆ ಇದೆ ಎನ್ನುವದಾದರೆ 126 ವಿಮಾನಗಳನ್ನು ಏಕೆ ಖರೀದಿಸಲಿಲ್ಲ? 36ಕ್ಕೆ ಇಳಿಸಿದ್ದು ಏಕೆ ಎಂದು ಆಂಟನಿ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com