ಗೋವಾ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಬಿಜೆಪಿ ಏನು ಮಾಡಲಿದೆ ಎಂಬುದು ಅಮಿತ್ ಶಾ ಗೆ ಮಾತ್ರ ಗೊತ್ತು!

ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.
ಅಮಿತ್ ಶಾ
ಅಮಿತ್ ಶಾ
Updated on: 
ಪಣಜಿ: ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು,  ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.
ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ದೆಹಲಿಗೆ ಗೋವಾ ಶಾಸಕರನ್ನು ಕರೆಸಿಕೊಂಡಿದ್ದು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.  ಗೋವಾದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಕಾಂಗ್ರೆಸ್ ಪಕ್ಷದ 16 ಶಾಸಕರು ಈಗಾಗಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ವಿಪಕ್ಷ ನಾಯಕರಾಗಿರುವ ಚಂದ್ರಕಾಂತ್ ಕಲ್ವೆಕರ್ ಗೋವಾ ಸರಕರ ರಚನೆಗೆ ಹಕ್ಕು ಮಂಡಿಸಿದ್ದು, ನಮ್ಮ ಬಳಿ ಸರ್ಕಾರ ರಚಿಸಲು ಅಗತ್ಯವಿರುವ 21 ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ. 
"ನಮ್ಮೊಂದಿಗೆ ಯಾರೆಲ್ಲಾ ಸಂಪರ್ಕದಲ್ಲಿದ್ದಾರೆ, ಏನೆಲ್ಲಾ ಚರ್ಚೆಗಳು ನಡೆದಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ, ಆದರೆ ಸರ್ಕಾರ ರಚನೆ ಮಾಡುವುದಕ್ಕೆ ಅಗತ್ಯವಿರುವಷ್ಟು ಬಹುಮತ ಇದೆ ಎಂದು  ಹೇಳಿದ್ದಾರೆ. ರಾಜ್ಯಪಾಲ ಮೃದುಲಾ ಸಿನ್ಹಾ ಅವರನ್ನು ಭೇಟಿ ಮಾಡಿರುವ ಚಂದ್ರಕಾಂತ್ ಕಲ್ವೆಕರ್ ಗೋವಾ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ರಾಜ್ಯಪಾಲರಿಂದ ಪ್ರತಿಕ್ರಿಯೆಗೆ ಎದುರು ನೋಡುತ್ತಿದ್ದಾರೆ. 
ಗೋವಾದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷದ ನಡೆಯ ಬೆನ್ನಲ್ಲೇ ಬಿಜೆಪಿ ಶಾಸಕರೊಂದಿಗೆ ಸಮಾಲೋಚನೆ ನಡೆಸುತ್ತಿರುವ ಅಮಿತ್ ಶಾ ಸರ್ಕಾರ ಉಳಿಸಿಕೊಳ್ಳುವುದಕ್ಕೆ ತಂತ್ರ ಹೆಣೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com