ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಮಂತ್ರಿಗಳ ಸಭೆ ಪ್ರಸ್ತಾಪವನ್ನಿಟ್ಟು "ಸ್ವಾಗತಾರ್ಹ ಹೆಜ್ಜೆ" ಇರಿಸಿದ್ದಾರೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಶಾಂತಿ ವಿಚಾರಗಳು, ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಮಂತ್ರಿಗಳ ನಡುವಿನ ಸಭೆಗೆ ಒಪ್ಪುವ ಮೂಲಕ ಸ್ವಾಗತಾರ್ಹ ಹೆಜ್ಜೆ ಇರಿಸಿದ್ದಾರೆ ಎಂದು ಮುಫ್ತಿ ಹೇಳಿದರು.
ವಿಶ್ವಸಂಸ್ಥೆಯ 73ನೇ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಸಚಿವವೆ ಸುಷ್ಮಾ ಸ್ವರಾಜ್ ಮತ್ತು ಪಾಕಿಸ್ತಾನಿ ಸಚಿವ ಷಾ ಮೆಹಮೂದ್ ಖುರೇಷಿ ದ್ವಿಪಕ್ಷೀಯ ಸಭೆ ನಡೆಸಲು ಕೋರಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪಾಕಿಸ್ತಾನದ ಈ ಪ್ರಸ್ತಾಪಕ್ಕೆ ಭಾರತ ಒಪ್ಪಿಗೆ ಸೂಚಿಸಿದ್ದು ಮತ್ತೆ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗುವ ಸೂಚನೆ ಲಭ್ಯವಾಗಿದೆ.