ಈ ಬಗ್ಗೆ ಸ್ವತಃ ಎಂಇಎ ವಕ್ತಾರ ರವೀಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕೆ ಮನವಿ ಮಾಡಿತ್ತು. ಭಾರತ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಸುಷ್ಮಾ ಸ್ವರಾಜ್ ಹಾಗೂ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಯುಎನ್ ಜಿಎ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.