ಉಗ್ರ ನಿಗ್ರಹ ಕಾರ್ಯಾಚರಣೆ
ದೇಶ
ಬಂಡಿಪೋರಾದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಇಬ್ಬರು ಭಯೋತ್ಪಾದಕರು ಹತ!
ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸೆದೆ ಬಡಿದಿದೆ.
ಶ್ರೀನಗರ: ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸೆದೆ ಬಡಿದಿದೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ಉಗ್ರರಿಗೆ ದಿಟ್ಟ ಉತ್ತರ ನೀಡುತ್ತಿದ್ದು, ನಿನ್ನೆ ತಡರಾತ್ರಿಯಿಂದಲೂ ನಡೆಯುತ್ತಿರುವ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ನಿರ್ಣಾಯಕ ಘಟ್ಟ ತಲುಪಿದೆ.
ಇಂದು ಬೆಳಗ್ಗೆ ಬಂಡಿಪೋರಾದ ಸುಲ್ಮಾರ್ ಪ್ರದೇಶದಲ್ಲಿ ಅಡಗಿ ಕುಳಿತು ಸೇನೆ ಮೇಲೆ ದಾಳಿ ಮಾಡುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಗುಂಡಿಕ್ಕೆ ಹತ್ಯೆಗೈದಿದ್ದು, ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಪ್ರಸ್ತುತ ಸುತ್ತಮುತ್ತಲ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಅಂತೆಯೇ ಸೇನಾಧಿಕಾರಿಗಳು ನೀಡಿರುವ ಮಾಹಿತಿಯನ್ವಯ ಉಗ್ರರ ಶವದ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ