ವಿಜಯವಾಡ: ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ ಒಡೆದು ಆಳುವ ನೀತಿ ಪಾಲಿಸುತ್ತಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ,
ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಎರಡು ರಾಜ್ಯಗಳ ನಡುವೆ ಕೇಂದ್ರ ಭಿನ್ನಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿದೆ. ಆದರೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಸಹೋದರರಂತಿದ್ದಾರೆ. ಕೇಂದ್ರ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ದಕ್ಷಿಣ ರಾಜ್ಯಗಳಿಗೆ ಕೇಂದ್ರ ಯಾವುದೇ ರೀತಿಯ ಸಹಾಯ ನೀಡುತ್ತಿಲ್ಲ, ದಕ್ಷಿಣ ರಾಜ್ಯಗಳು ಹೆಚ್ಚಿನ ತೆರಿಗೆ ಪಾವತಿಸುತ್ತಿವೆ ಎಂದು ಹೇಳಿದ್ದಾರೆ,
ಆಂಧ್ರಪ್ರದೇಶದ ಅಭಿವೃದ್ಧಿಗಾಗಿ ಎನ್ ಡಿಎ ಮೈತ್ರಿ ಕೂಟದ ಜೊತೆ ಕೈ ಜೋಡಿಸಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದಾರೆ, ತಮ್ಮ ಆಡಳಿತಾವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದೇನೆ, ಹೀಗಾಗಿ ಹೈದರಾಬಾದ್ ಐಟಿ ಹಬ್ ಆಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.