ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್'ಲೈನ್ಸ್ ಬಸ್'ನಲ್ಲಿ ಬೆಂಕಿ: ತಪ್ಪಿದ ದುರಂತ
ದೇಶ
ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್'ಲೈನ್ಸ್ ಬಸ್'ನಲ್ಲಿ ಬೆಂಕಿ: ತಪ್ಪಿದ ದುರಂತ
ಚೆನ್ನೈ ವಿಮಾನ ನಿಲ್ದಾಣದ ಬಳಿ ಇಂಡಿಯೋ ಏರ್'ಲೈನ್ಸ್'ಗೆ ಸೇರಿದ ಬಸ್ ವೊಂದರಲ್ಲಿ ಬೆಂಕಿ ಕಾಣಿಸಿಕೊಕಂಡಿದ್ದು, ಕೂದಲೆಳೆ ಅಂತರದಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ...
ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದ ಬಳಿ ಇಂಡಿಯೋ ಏರ್'ಲೈನ್ಸ್'ಗೆ ಸೇರಿದ ಬಸ್ ವೊಂದರಲ್ಲಿ ಬೆಂಕಿ ಕಾಣಿಸಿಕೊಕಂಡಿದ್ದು, ಕೂದಲೆಳೆ ಅಂತರದಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.
ಬಸ್ ನಲ್ಲಿ ಒಟ್ಟು 50 ಪ್ರಯಾಣಿಕರಿದ್ದು, ಬಸ್ ವಿಮಾನ ನಿಲ್ದಾಣವನ್ನು ಆಗಷ್ಟೇ ಪ್ರವೇಶ ಮಾಡುತ್ತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸಿಬ್ಬಂದಿಗಳು ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತುತ್ತಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ