ರಾಫೆಲ್ ಡೀಲ್ ಗೆ ರಿಲಯನ್ಸ್ ಡಿಫೆನ್ಸ್ ಆಯ್ಕೆಯಲ್ಲಿ ತನ್ನ ಪಾತ್ರ ಇಲ್ಲ: ರಕ್ಷಣಾ ಸಚಿವಾಲಯ

ರಾಫೆಲ್ ಡೀಲ್ ಗೆ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಡಿಫೆನ್ಸ್ ಆಯ್ಕೆಯಲ್ಲಿ ತನ್ನ ಪಾತ್ರ ಇಲ್ಲ ಎಂದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಫೆಲ್ ಡೀಲ್ ಗೆ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಡಿಫೆನ್ಸ್ ಆಯ್ಕೆಯಲ್ಲಿ ತನ್ನ ಪಾತ್ರ ಇಲ್ಲ ಎಂದು ರಕ್ಷಣಾ ಸಚಿವಾಲಯ ಶನಿವಾರ ಸ್ಪಷ್ಟಪಡಿಸಿದೆ.
ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ರಿಲಯನ್ಸ್ ಡಿಫೆನ್ಸ್ ಅನ್ನು ಆಯ್ಕೆ ಮಾಡಿದ್ದು ಭಾರತ ಎಂದು ನಿನ್ನೆ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರ ಹೇಳಿಕೆ ಹಿನ್ನೆಲೆಯಲ್ಲಿ ರಕ್ಷಣಾ ಸಚಿವಾಲಯ ಇಂದು ಈ ಸ್ಪಷ್ಟನೆ ನೀಡಿದೆ.
ಹೊಲಾಂಡೆ ಹೇಳಿಕೆಗೆ ಸಂಬಂಧಿಸಿದಂತೆ ಅನಗತ್ಯವಾಗಿ ವಿವಾದ ಸೃಷ್ಟಿಸಲಾಗುತ್ತಿದೆ. ರಿಲಯನ್ಸ್ ಆಯ್ಕೆಯಲ್ಲಿ ತನ್ನ ಪಾತ್ರ ಏನೂ ಇಲ್ಲ ಎಂದು ರಕ್ಷಣಾ ಸಚಿವಾಲಯ ಪುನರುಚ್ಚಿರಿಸಿದೆ.
ಈ ಹಿಂದೆಯೂ ಕೇಂದ್ರ ಸರ್ಕಾರ, ರಿಲಾಯನ್ಸ್ ಮತ್ತು ಡಸಾಲ್ಟ್ ನಡುವೆ ವಾಣಿಜ್ಯ ಒಪ್ಪಂದವಾಗಿದ್ದು, ಅದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com